ಶ್ರೀನಗರ: ಇಂದು ಶುಕ್ರವಾರವಾಗಿರುವುದರಿಂದ ಮುಸಲ್ಮಾನರು ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿದ ಬಳಿಕ ವ್ಯಾಪಕ ಹಿಂಸಾಚಾರ ನಡೆಯುವ ಸಾಧ್ಯತೆ ನಡೆಸಬಹುದೆಂಬ ಭೀತಿಯಿಂದ ಅಧಿಕಾರಿಗಳು ಜಮ್ಮು-ಕಾಶ್ಮೀರದ ಎಲ್ಲಾ 10 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಈ ಮೂಲಕ ಕರ್ಫ್ಯೂ ಇಂದು ಏಳನೇ ದಿನಕ್ಕೆ ಕಾಲಿಟ್ಟಿದೆ.
ಸಮಾಜ ವಿರೋಧಿ ಅಂಶಗಳಿಂದ ಸಾಮಾಜಿಕ ತಾಣದಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸುವುದನ್ನು ತಡೆಯಲು ಕಣಿವೆ ರಾಜ್ಯದಲ್ಲಿ ಎಲ್ಲಾ ಅಂತರ್ಜಾಲ ಮತ್ತು ಮೊಬೈಲ್ ಫೋನ್ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ದಕ್ಷಿಣ ಕಾಶ್ಮೀರದ ಅನಂತನಾಗ್, ಶೋಪಿಯಾನ್, ಕುಗಮ್, ಪುಲ್ವಾಮಾ ಜಿಲ್ಲೆಗಳಲ್ಲಿ ಕಳೆದ ಆರು ದಿನಗಳಿಂದ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ನಿನ್ನೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.
ಆದರೆ ಸೀಮಿತ ಮೊಬೈಲ್ ಫೋನ್ ಸಂಪರ್ಕವನ್ನು ಒಂದು ಸೇವಾ ಪೂರೈಕೆದಾರರ ಮೂಲಕ ಫೋನ್ ಸಂಪರ್ಕ ಮಾಡಲಾಗುತ್ತದೆ. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಒಂದು ನಿರ್ದಿಷ್ಟ ಕಂಪೆನಿಯ ಮೊಬೈಲ್ ಫೋನ್ ಸಂಪರ್ಕವನ್ನು ಮಾತ್ರ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗಿದೆ.
ಹಿಜ್ ಬುಲ್ ಕಮಾಂಡರ್ ಬುರ್ಹಾನ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ಕಳೆದ ಶುಕ್ರವಾರ ಅನಂತನಾಗ್ ಜಿಲ್ಲೆಯ ಕುಕರ್ನಾಗ್ ಹತ್ಯೆ ಮಾಡಿರುವುದನ್ನು ಖಂಡಿಸಿ ಗುಂಪೊಂದು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದ್ದು ವ್ಯಾಪಕ ಹಿಂಸಾಚಾರಕ್ಕೆ ತಿರುಗಿದ್ದು, ಇದುವರೆಗೆ 36 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ 35 ಮಂದಿ ನಾಗರಿಕರು ಮತ್ತು ಒಬ್ಬ ಸ್ಥಳೀಯ ಪೊಲೀಸ್ ಸೇರಿದ್ದಾರೆ.