
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಕ್ಷಿಣ ಕಾಶ್ಮೀರದ ಯಾರಿಪೋರ ಪೊಲೀಸ್ ಠಾಣೆಯ ಮೇಲೆ ದುಷ್ಕರ್ಮಿಗಳು ಗ್ರೈನೇಡ್ ದಾಳಿ ನಡೆಸಿದ್ದು ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ.
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಇದೀಗ ದುಷ್ಕರ್ಮಿಗಳೊಂದಿಗೆ ಸೇರಿ ಶಂಕಿತ ಉಗ್ರರು ಪೊಲೀಸ್ ಠಾಣೆಯ ಮೇಲೆ ಗ್ರೈನೇಡ್ ಎಸೆದಿದ್ದಾರೆ. ಈ ದಾಳಿಯಲ್ಲಿ ಓರ್ವ ಪೇದೆ ಸಾವನ್ನಪ್ಪಿದ್ದು, ಐವರು ಪೊಲೀಸರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement