ನಬಂ ತುಕಿ ರಾಜಿನಾಮೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಖಂಡು ಆಯ್ಕೆ

ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಶನಿವಾರ ಬಹುಮತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ...
ಪೆಮಾ ಖಂಡು
ಪೆಮಾ ಖಂಡು
ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಶನಿವಾರ ಬಹುಮತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಿದ್ದು, ನಬಂ ತುಕಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪೆಮಾ ಖಂಡು ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿಲಾಗಿದೆ.
ಶತಾಯಗತಾಯ ಬಹುಮತ ಸಾಬೀತುಪಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಅತಿ ಹೆಚ್ಚು ಶಾಸಕರ ಬೆಂಬಲ ಹೊಂದಿರುವ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ವಿಶ್ವಾಸಮತ ಸಾಬೀತುಪಡಿಸಿದರೆ, ಅರುಣಾಚಲದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ಪೆಮಾ ಖಂಡು ಅವರು ಆಯ್ಕೆಯಾಗಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೇಮಾಂಗ್ ಡೊಲೊ ಅವರು ಹೇಳಿದ್ದಾರೆ.
ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ತುಕಿ, ಬಹಮತ ಸಾಬೀತುಪಡಿಸಲು 10 ದಿನಗಳ ಕಾಲವಕಾಶ ನೀಡುವಂತೆ ಕೋರಿದ್ದರು. ಆದರೆ ಇದಕ್ಕೆ ನಿರಾಕರಿಸಿದ್ದ ಪ್ರಭಾರ ರಾಜ್ಯಪಾಲ ತಥಾಗತ ರಾಯ್‌ ಅವರು ನಿಗದಿಯಂತೆ ಇಂದೇ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ.
60 ಸದಸ್ಯ ಬಲದ ಅರುಣಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್‌-15,ಪದಚ್ಯುತ ಸಿಎಂ ಕಲಿಖೋ ಪುಲ್‌ ಅವರ ಪಿಪಿಎ-30, ಬಿಜೆಪಿ-11, ಇಬ್ಬರು ಪಕ್ಷೇತರರನ್ನು ಒಳಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com