ಅರುಣಾಚಲ ರಾಜ್ಯಪಾಲರ ಭೇಟಿ ಮಾಡಿದ ಖಂಡು, ಸರ್ಕಾರ ರಚನೆಯ ಹಕ್ಕು ಮಂಡನೆ

ನಾಟಕೀಯ ಬೆಳವಣಗೆಯಲ್ಲಿ ಅರುಣಾಚಲ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪೆಮಾ ಖಂಡು ಅವರು ಶನಿವಾರ ಪ್ರಭಾರ...
ಪೆಮಾ ಖಂಡು
ಪೆಮಾ ಖಂಡು
Updated on
ಇಟಾನಗರ: ನಾಟಕೀಯ ಬೆಳವಣಗೆಯಲ್ಲಿ ಅರುಣಾಚಲ ಪ್ರದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪೆಮಾ ಖಂಡು ಅವರು ಶನಿವಾರ  ಪ್ರಭಾರ ರಾಜ್ಯಪಾಲ ತಥಾಗತ ರಾಯ್‌ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡು, ನಾನು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದೇನೆ. ಆದರೆ ಪ್ರಮಾಣವಚನ ಸ್ವೀಕರಿಸುವ ದಿನಾಂಗ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
ಪೆಮಾ ಖಂಡು ಅವರು 44 ಬೆಂಬಲ ಶಾಸಕರೊಂದಿಗೆ ರಾಜಭವನಕ್ಕೆ ಆಗಮಿಸಿದ್ದರು.
ಈ ಮಧ್ಯೆ ನಬಂ ತುಕಿ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಶತಾಯಗತಾಯ ಬಹುಮತ ಸಾಬೀತುಪಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಅತಿ ಹೆಚ್ಚು ಶಾಸಕರ ಬೆಂಬಲ ಹೊಂದಿರುವ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ವಿಶ್ವಾಸಮತ ಸಾಬೀತುಪಡಿಸಿದರೆ, ಅರುಣಾಚಲದ ನೂತನ ಸಿಎಂ ಆಗಿ ಖಂಡು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
60 ಸದಸ್ಯ ಬಲದ ಅರುಣಾಚಲ ವಿಧಾನಸಭೆಯಲ್ಲಿ ಕಾಂಗ್ರೆಸ್‌-15,ಪದಚ್ಯುತ ಸಿಎಂ ಕಲಿಖೋ ಪುಲ್‌ ಅವರ ಪಿಪಿಎ-30, ಬಿಜೆಪಿ-11, ಇಬ್ಬರು ಪಕ್ಷೇತರರನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com