ಕೇಂದ್ರ ಸರ್ಕಾರಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: 3ತಿಂಗಳ ವೇತನ ಸಹಿತ ರಜೆ

ಲೈಂಗಿಕ ಶೋಷಣೆಗೆ ಒಳಗಾದ ಸಂಬಂಧ ದೂರು ದಾಖಲಿಸುವ ಕೇಂದ್ರ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸರ್ಕಾರ 3 ತಿಂಗಳ ವೇತನ ಸಹಿತ ರಜೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಲೈಂಗಿಕ ಶೋಷಣೆಗೆ ಒಳಗಾದ ಸಂಬಂಧ ದೂರು ದಾಖಲಿಸುವ ಕೇಂದ್ರ  ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸರ್ಕಾರ 3 ತಿಂಗಳ ವೇತನ ಸಹಿತ ರಜೆ ಘೋಷಿಸಿದೆ.

ಈಗಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ರಜೆಯೊಂದಿಗೆ ಇದು ಸೇರ್ಪಡೆಯಾಗಲಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯ ಮೇಲೆ ಯಾವುದೇ ವ್ಯಕ್ತಿ ಕೆಲಸದ ಸ್ಥಳದಲ್ಲಿ ಪ್ರಭಾವ ಬೀರುತ್ತಿದ್ದಾರೆ ಮತ್ತು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದೆ. ಈ ಹಿನ್ನೆಯಲ್ಲಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ವಿಚಾರಣೆಯ ಅವಧಿಯಲ್ಲಿ ಗರಿಷ್ಠ 90 ದಿನಗಳವರೆಗೆ ವೇತನಸಹಿತ ರಜೆ ಪಡೆಯಲು ಲೈಂಗಿಕ ಕಿರುಕುಳಕ್ಕೆ ತುತ್ತಾದ ಮಹಿಳೆಗೆ ಅನುಮತಿ ನೀಡಲಾಗುವುದು.

ವಿಚಾರಣೆ ಸಂದರ್ಭದಲ್ಲಿ ಮಹಿಳೆಗೆ ಕಚೇರಿಯಲ್ಲಿ ಎದುರಾಗುವ ಮುಜುಗರವನ್ನು ತಪ್ಪಿಸಲು 90 ದಿನಗಳ ವೇತನ ಸಹಿತ ರಜೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಯಂತ್ರಣ, ನಿಷೇಧ ಮತ್ತು ನಿವಾರಣಾ) ಕಾಯ್ದೆ 2013ರ ಅನ್ವಯ 90 ದಿನ ರಜೆ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವಾಲಯ ತನ್ನ ಅದೇಶದಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com