
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಯಶಸ್ಸು ಕಂಡಿರುವ ಸಮಬೆಸ ನಿಯಮವನ್ನು ಮತ್ತೆ ಜಾರಿಗೆ ತರಲು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಜಧಾನಿ ದೆಹಲಿಯಲ್ಲಿ ಚಳಿಗಾಲ ಸಮಯದಲ್ಲಿ ಮತ್ತೆ ಸಮಬೆಸ ನಿಯಮವನ್ನು ಜಾರಿ ತರಲಿದ್ದೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಸಾರಿಗೆ ಸಚಿವ ಸತ್ಯೇಂದರ್ ಜೈನ್ ಅವರು, "ಮುಂಗಾರು ಸಮಯದಲ್ಲಿ ಸಮಬೆಸ ನಿಯಮ ಜಾರಿ ಮಾಡುವ ಅಗತ್ಯವಿರುವುದಿಲ್ಲ. ಈ ಸಮಯದಲ್ಲಿ ಮಾಲಿನ್ಯದ ಸಂಖ್ಯೆ ಕಡಿಮೆ ಮಟ್ಟದಲ್ಲಿಯೇ ಇರುತ್ತದೆ. ಆದರೆ ಚಳಿಗಾಲ ಸಮಯದಲ್ಲಿ ನಿಯಮವನ್ನು ಜಾರಿ ಮಾಡುವ ಅಗತ್ಯವಿರುತ್ತದೆ. ಹೀಗಾಗಿ ಈ ಸಮಯದಲ್ಲಿಯೇ ನಿಯಮವನ್ನು ಜಾರಿಗೆ ತರಬೇಕೆಂದು ಈ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
Advertisement