
ಪಾಟ್ನಾ: ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್ಪಿಎಫ್ ಕಮಾಂಡೋಗಳು ಹುತಾತ್ಮರಾಗಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಯ ಗಡಿ ಭಾಗ ದುಮ್ರಿ ನಲ್ಲಾ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಲ್ಲಾ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಸಿಆರ್ಪಿಎಫ್ ಪಡೆ ಶೋಧ ಕಾರ್ಯ ನಡೆಸುತ್ತಿತ್ತು. ಈ ವೇಳೆ ನಕ್ಸಲರು 21 ಸುಧಾರಿತ ಸ್ಪೋಟಕಗಳನ್ನು ಸಿಡಿಸಿದ್ದಾರೆ. ಇದರಲ್ಲಿ 10 ಕಮಾಂಡೋಗಳು ಹುತಾತ್ಮರಾಗಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ 4 ನಕ್ಸಲರು ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆಯಿಂದ ನಕ್ಸಲರ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದ್ದು, ರಾತ್ರಿ ನಕ್ಸಲರು ಐಇಡಿ ಬಾಂಬ್ ಸ್ಫೋಟಿಸಿದ್ದಾರೆ. ಇನ್ನು ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲು ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
Advertisement