ಮಹಾತ್ಮ ಗಾಂಧಿ ಕೊಂದಿದ್ದು ಆರ್ ಎಸ್ಎಸ್: ರಾಹುಲ್ ಗಾಂಧಿಗೆ ಸುಪ್ರೀಂ ಛೀಮಾರಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್ ಎಸ್ ಎಸ್ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ ಕ್ಷಮೆ ಕೋರುವಂತೆ ..
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್ ಎಸ್ ಎಸ್ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ ಕ್ಷಮೆ ಕೋರುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ವಿಷಯ ವಿಚಾರಣೆಯಲ್ಲಿರುವುದರಿಂದ ಆರೆಸ್ಸೆಸ್‌ ವಿರುದ್ಧದ ಅವರ ಹೇಳಿಕೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಷಯ ಏನಿದೆ ಎಂಬುದನ್ನು ರಾಹುಲ್‌ ಸಾಬೀತು ಪಡಿಸಬೇಕು ಎಂದು ಕೋರ್ಟ್‌ ತಾಕೀತು ಮಾಡಿದೆ.

ರಾಹುಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರವಾಗಿ ಕ್ಷಮೆ ಕೋರಲು ಅವರು ಸಿದ್ಧರಿಲ್ಲ. ಹಾಗಾಗಿ ವಿಚಾರಣೆ ಎದುರಿಸುವುದೇ ಸರಿ ಎಂದು ಸುಪ್ರೀಂಕೋರ್ಟ್‌ ಹೇಳಿ, ಜುಲೈ 27ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಒಂದು ಸಂಸ್ಥೆಯ ಬಗ್ಗೆ ದೂಷಣೆ ಮಾಡುವ ಹಕ್ಕು ನಿಮ್ಮಗಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಉತ್ತರ ಪ್ರದೇಶದ ರ್ಯಾಲಿಯೊಂದರಲ್ಲಿ  ಮಾತನಾಡಿದ್ದ ರಾಹುಲ್ ಗಾಂಧಿ , ಮಹಾತ್ಮ ಗಾಂಧಿ ಅವರನ್ನು ಆರ್ ಎಸ್ ಎಸ್ ನವರು ಹತ್ಯೆ ಮಾಡಿದ್ದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com