ನವಜೋತ್ ಸಿಂಗ್ ಸಿಧು ಗೆ ಕಾಂಗ್ರೆಸ್ ಬಾಗಿಲು ತೆರೆದಿದೆ: ಅಮರಿಂದರ್ ಸಿಂಗ್

ಅಮೃತ್ ಸರದ ಮಾಜಿ ಸಂಸದ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಗೆ ಸೇರುವುದಾದರೆ ಪಕ್ಷದ ಬಾಗಿಲು ತೆರೆದಿದೆ ಎಂದು ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಅಮರೀಂದರ್ ಸಿಂಗ್
ಅಮರೀಂದರ್ ಸಿಂಗ್
Updated on: 

ಚಂಡೀಗಢ: ಅಮೃತ್ ಸರದ ಮಾಜಿ ಸಂಸದ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಗೆ ಸೇರುವುದಾದರೆ ಪಕ್ಷದ ಬಾಗಿಲು ತೆರೆದಿದೆ ಎಂದು ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷ ಅಮರಿಂದರ್ ಸಿಂಗ್ ಹೇಳಿದ್ದಾರೆ.

"ಕಾಂಗ್ರೆಸ್ ನ ಬಾಗಿಲು ಎಲ್ಲರಿಗೂ ತೆರೆದಿದೆ, ಬಿಜೆಪಿಯನ್ನು ತೊರೆದಿರುವ ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಕಾಂಗ್ರೆಸ್ ಗೆ ಸೇರುವುದಾದರೆ ಸ್ವಾಗತಿಸುತ್ತೇವೆ" ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.  

ಸಿಧು ಕಾಂಗ್ರೆಸ್ ಸೇರುವ ವಿಷಯವಾಗಿ ತಮ್ಮ ಹಾಗೂ ಅವರ ನಡುವೆ ಮಾತುಕತೆ ನಡೆದಿಲ್ಲ ಎಂದು ಅಮರಿಂದರ್ ಸಿಂಗ್ ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ ನ ಬೇರೆ ನಾಯಕರು ಸಿಧು ಅವರೊಂದಿಗೆ ಸಂಪರ್ಕದಲ್ಲಿರುವುದರ ಬಗ್ಗೆಯೂ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಚಂಡೀಗಢದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್, ನವಜೋತ್ ಸಿಂಗ್ ಸಿಧು ಅವರ ತಂದೆ ಭಗವಂತ್ ಸಿಂಗ್ ಸಿಧು ಸಹ ಕಾಂಗ್ರೆಸ್ ನೊಂದಿಗೆ ಒಡನಾಟ ಹೊಂದಿದ್ದರು, ಆದ್ದರಿಂದ ಸಿಧು ಅವರಿಗೆ ಕಾಂಗ್ರೆಸ್ ನ ಹಿನ್ನೆಲೆ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com