ಲೋಕಸಭೆಯಲ್ಲಿ ಗಣಪತಿ, ಕಲ್ಲಪ್ಪ ಆತ್ಮಹತ್ಯೆ ಪ್ರಕರಣ ಪ್ರಸ್ತಾಪಿಸಿದ ಯಡಿಯೂರಪ್ಪ

ಲೋಕಸಭೆ ಕಲಾಪದಲ್ಲಿ ಡಿವೈಎಸ್ಪಿ ಎಂಕೆ ಗಣಪತಿ ಹಾಗೂ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿಎಸ್ ಯಡಿಯೂರಪ್ಪ ಪ್ರಸ್ತಾಪಿಸಿ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ನವದೆಹಲಿ: ಲೋಕಸಭೆ ಕಲಾಪದಲ್ಲಿ ಡಿವೈಎಸ್ಪಿ ಎಂಕೆ ಗಣಪತಿ ಹಾಗೂ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಬಿಎಸ್ ಯಡಿಯೂರಪ್ಪ ಪ್ರಸ್ತಾಪಿಸಿ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದ್ದ ಎರಡು ಪ್ರಕರಣಗಳ ಬಗ್ಗೆ ಕನ್ನಡದಲ್ಲಿಯೇ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದರು. ಅಲ್ಲದೆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸದನದಲ್ಲಿ ಯಡಿಯೂರಪ್ಪ ಆತ್ಮಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸುತ್ತಿದ್ದಂತೆ ರಾಜ್ಯದ ಕಾಂಗ್ರೆಸ್ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಷಯ. ಹಾಗಾಗಿ ರಾಜ್ಯದ ವಿಷಯ ಸದನದಲ್ಲಿ ಪ್ರಸ್ತಾಪಿಸಲು ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಸಂಸದರಾದ ಧ್ರುವ ನಾರಾಯಣ್, ಮುದ್ದೇಹನುಮಗೌಡ, ಹುಕ್ಕೇರಿ, ಚಂದ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com