ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಬಾಂಗ್ಲಾ ಒಂಟಿಯಲ್ಲ, ಭಾರತದ ಬೆಂಬಲ ಇದೆ: ಪ್ರಧಾನಿ ಮೋದಿ

ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಬಾಂಗ್ಲಾದೊಂದಿಗೆ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ:ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಬಾಂಗ್ಲಾದೊಂದಿಗೆ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾ ದೇಶದಲ್ಲಿ ರಂಜಾನ್ ದಿನ ನಡೆದ ಉಗ್ರ ದಾಳಿಯನ್ನು ಖಂಡಿಸಿದ್ದು, ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಭಾರತದ ಅಭಿವೃದ್ಧಿ ನೆರೆ ರಾಷ್ಟ್ರಗಳ ಅಭಿವೃದ್ಧಿಗೆ ಸಂಪರ್ಕ ಹೊಂದಿದೆ ಎಂದಿರುವ ಪ್ರಧಾನಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಬಾಂಗ್ಲಾ ದೇಶ ಏಕಾಂಗಿಯಲ್ಲ, ಭಾರತ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ಪೆಟ್ರಾಪೋಲ್-ಬೀನಾಪೋಲ್ ವ್ಯಾಪಾರ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾ ಪ್ರಧಾನಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com