
ನವದೆಹಲಿ: ಕಾಶ್ಮೀರ ವಿಷಯದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಡೆಗೆ ಅಸಮಾಧಾನಗೊಂಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ದೇಶದ ಏಕತೆ ಮುಖ್ಯವೇ ಹೊರತು ಉಗ್ರರ ಪ್ರಾಣವಲ್ಲ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.
ಭಾರತೀಯ ಜನತಾಪಕ್ಷ( ಬಿಜೆಪಿ) ದೇಶದ ಭದ್ರತೆಗೆ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ದೇಶದ ಸಮಗ್ರತೆಯೇ ಮುಖ್ಯವಾದದ್ದೇ ಹೊರತು ಉಗ್ರರ ಜೀವಗಳಲ್ಲ ಎಂದು ಕಾಶ್ಮೀರ ವಿಷಯ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಟಿವಿ ಚಾನಲ್ ಒಂದಕ್ಕೆ ಸಂದರ್ಶನ ನೀಡಿದ್ದ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಬೇಕಾದರೆ ವಿಧಿಸಿದ್ದ ಷರತ್ತುಗಳನ್ನು ಸರಿಯಾಗಿ ಗೌರವಿಸಲಾಗುತ್ತಿಲ್ಲ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು, ಕಾಶ್ಮೀರ ವಿಷಯದಲ್ಲಿ ಕೀಳು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ದೇಶದ ಭದ್ರತೆ ವಿಚಾರದಲ್ಲಿ ರಾಜಿಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಸಹಾನುಭೂತಿ ತೋರುತ್ತಿರುವವರು ಹಾಗೂ ಅಂಕಣಗಳನ್ನು ಬರೆಯುತ್ತಿರುವವರು ದೇಶದ ಜನತೆಯ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
Advertisement