
ಅಮೃತ್ ಸರ: ಪಂಜಾಬ್ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ, ನವಜೋತ್ ಸಿಂಗ್ ಸಿಧು ಅವರನ್ನು ಪಕ್ಷದ ಸಿಎಂ ಅಭ್ಯರ್ಥಿಎಂದು ಘೋಷಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು, ನವಜೋತ್ ಸಿಧು ಅವರನ್ನು ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಜು.18 ರಂದು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿ ಇತ್ತು.
ನವಜೋತ್ ಸಿಂಗ್ ಸಿಧು ಅವರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ಪಂಜಾಬ್ ನ ಸಂಚಾಲಕ ಸುಚಾ ಸಿಂಗ್, ಸಿಧು ಆಮ್ ಆದ್ಮಿ ಪಕ್ಷ ಸೇರುತ್ತಾರೆ ಹಾಗೂ ಪಕ್ಷದ ಪರ ಪ್ರಚಾರ ನಡೆಸುತ್ತಾರೆ ಎಂಬುದನ್ನು ಆಪ್ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ, ಆದರೆ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ನವಜೋತ್ ಸಿಂಗ್ ಸಿಧು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಾದ್ದರಿಂದ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದಿಲ್ಲ ಎಂದು ಆಪ್ ತಿಳಿಸಿದೆ.
Advertisement