ಕಟ್ಟಡ ಕುಸಿತ
ದೇಶ
ಡಾರ್ಜಿಲಿಂಗ್: ಕಟ್ಟಡ ಕುಸಿತದಲ್ಲಿ ನಾಲ್ವರು ಸಾವು
ನಾಲ್ಕು ಅಂತಸ್ಥಿನ ಹಳೆಯ ಕಟ್ಟಡವೊಂದು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನ ಝಕೀರ್...
ಡಾರ್ಜಿಲಿಂಗ್: ನಾಲ್ಕು ಅಂತಸ್ಥಿನ ಹಳೆಯ ಕಟ್ಟಡವೊಂದು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನ ಝಕೀರ್ ಹುಸೇನ್ ಕೊಳಚೆ ಪ್ರದೇಶದಲ್ಲಿ ಸಂಭವಿಸಿದೆ.
ಕಳೆದ ರಾತ್ರಿ 10.30ರ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು 9 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ