ಕಾಶ್ಮೀರದ ಪರಿಸ್ಥಿತಿ ಸುಧಾರಣೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಘೋಷಿಸಬೇಕು: ಕಾಂಗ್ರೆಸ್

ಕಾಶ್ಮೀರದ ಸ್ಥಿತಿಗತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್, ಗೃಹ ಸಚಿವ ರಾಜನಾಥ್ ಸಿಂಗ್ ಕಣಿವೆ ರಾಜ್ಯಕ್ಕೆ...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ)
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ)
Updated on: 
ನವದೆಹಲಿ: ಕಾಶ್ಮೀರದ ಸ್ಥಿತಿಗತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್, ಗೃಹ ಸಚಿವ ರಾಜನಾಥ್ ಸಿಂಗ್ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಜನರಲ್ಲಿ ವಿಶ್ವಾಸ ಹುಟ್ಟಿಸುವ ಕ್ರಮಗಳನ್ನು ಘೋಷಿಸಬೇಕು ಎಂದು ಒತ್ತಾಯಿಸಿದೆ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಮಾತನಾಡಿ, ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು. ಪ್ರಧಾನಿ ಮತ್ತು ಅವರ ಸಂಪುಟ ಸಚಿವರು ಕಾಶ್ಮೀರ ಜನರ ಬಗ್ಗೆ ಕಾಳಜಿ ಹೊಂದಿಲ್ಲ. ಕಾಶ್ಮೀರ ವಿಷಯ ಕುರಿತು ಚರ್ಚಿಸುವಾಗ ಲೋಕಸಭೆಯಲ್ಲಾಗಲಿ, ರಾಜ್ಯಸಭೆಯಲ್ಲಾಗಲಿ ಮೋದಿಯವರಿರಲಿಲ್ಲ ಎಂದರು.
ಘಟನೆ ನಡೆದು 16 ದಿನಗಳ ನಂತರ ಗೃಹ ಸಚಿವರು ಕಾಶ್ಮೀರಕ್ಕೆ ಹೋಗಿದ್ದಾರೆ. ಪೆಲ್ಲೆಟ್ ಗನ್ ನ್ನು ಇನ್ನು ಮುಂದೆ ಕಾಶ್ಮೀರದಲ್ಲಿ ಬಳಸುವುದಿಲ್ಲ ಎಂದು ಜನರಿಗೆ ಭರವಸೆ ನೀಡುವರು ಎಂಬ ವಿಶ್ವಾಸವಿದೆ. ಅಲ್ಲಿನ ಜನರನ್ನು ಕೂಡ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಗುಲಾಂ ನಬಿ ಆಜಾದ್ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com