ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ಎಎನ್-32 ವಿಮಾನದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದಲ್ಲಿ ಎ ಪಿ8I, ಒಂದು ಸಿಜಿಡಿಒ ಹಾಗೂ ಒಂದು ಸಿ 130 ಯನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಚೆನ್ನೈಗೆ ಆಗಮಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಚೆನ್ನೈ ಗೆ ಆಗಮಿಸುತ್ತಿದ್ದಂತೆಯೇ ತಾಂಬರಂ ಗೆ ವಿಮಾನದಲ್ಲಿ ಪ್ರಯಾಣಿಸಿದ ಮನೋಹರ್ ಪರಿಕ್ಕರ್, ಶೋಧ ಕಾರ್ಯಾಚರಣೆ ನಡೆಸಿದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಜು.22 ರಂದು ಬಂಗಾಳಕೊಲ್ಲಿಯಲ್ಲಿ ನಾಪತ್ತೆಯಾಗಿರುವ ಭಾರತೀಯ ವಾಯುಸೇನೆಯ ವಿಮಾನ ಚೆನ್ನೈ ನಿಂದ ಪೂರ್ವಕ್ಕೆ 280 ಕಿಮಿ ದೂರ ಇರಬೇಕಾದರೆ ರೇಡಾರ್ ಸಂಪರ್ಕ ಕಡಿದುಕೊಂಡಿತ್ತು. ಸುಮಾರು ನೌಕಾ ಪಡೆಯ 12 , ಕರಾವಳಿ ಕಾವಲು ಪಡೆಯ ಹಡಗುಗಳು ಶುಕ್ರವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿವೆ. ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಶೋಧ ಕಾರ್ಯಾಚರಣೆಯಲ್ಲಿ ಜಲಾಂತರ್ಗಾಮಿ ನೌಕೆಯನ್ನೂ ಬಳಸಲಾಗುತ್ತಿದೆ.
Advertisement