

ಭಾದೋಹಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಟೆಂಡರ್ ಹಾರ್ಟ್ ಶಾಲೆಗೆ ಸೇರಿದ ಮಿನಿ ಬಸ್ 10 ವರ್ಷದೊಳಗಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಟಕ್ ಮತ್ತು ಮಾದೋಸಿಂಗ್ ರೈಲ್ವೆ ನಿಲ್ದಾಣದ 26ನೇ ಗೇಟ್ ಬಳಿ ರೈಲ್ವೆ ಕ್ರಾಸಿಂಗ್ ಬಳಿ ವಾರಣಾಸಿ-ಅಲಹಾಬಾದ್ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದ್ದು ಈ ದುರ್ಘಟನೆ ಸಂಭವಿಸಿದೆ.
ಈ ದುರ್ಘಟನೆಯಲ್ಲಿ 8 ಶಾಲಾ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಡಿಎಂ ಮತ್ತು ಎಸ್ಪಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದ್ದಾರೆ.
Advertisement