ಕುಡಿದ ಅಮಲಿನಲ್ಲಿದ್ದ ಎಎಸ್ ಐ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಆರು ವರ್ಷದ ಬಾಲಕಿ ಮೇಲೆ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹರ್ಯಾಣದ ಜಿಂದ್ ನಲ್ಲಿ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಿಂದ್ : ಆರು ವರ್ಷದ ಬಾಲಕಿ ಮೇಲೆ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹರ್ಯಾಣದ ಜಿಂದ್ ನಲ್ಲಿ ನಡೆದಿದೆ.

ನಿನ್ನೆ ಸಂಜೆ ಜಿಂದ್ ನಿಂದ ಕರ್ನಾಲ್ ಗೆ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದೆವು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಎಎಸ್ ಐ ತನ್ನ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ.

ಬಸ್ ನಲ್ಲಿ ತುಂಬಾ ಜನರು ಪ್ರಯಾಣಿಸುತ್ತಿದ್ದರು. ತನ್ನ ಮಗಳನ್ನು ಎಎಸ್ಐ ರಾಮ್ ಪಾಲ್ ಪಕ್ಕದ ಸೀಟಿನಲ್ಲಿ ಕೂರಿಸಲಾಗಿತ್ತು. ಈ ವೇಳೆ ಎಎಸ್ ಐ ತಮ್ಮ ಮಗಳನ್ನು ಲೈಂಗಿಕವಾಗಿ ಹಿಂಸಿಸುತ್ತಿದ್ದುದ್ದನ್ನು ನೋಡಿ ಜೋರಾಗಿ ಕಿರುಚಿಕೊಂಡೆ. ಸಹ ಪ್ರಯಾಣಿಕರು ಇದನ್ನು ಗಮನಿಸಿ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು. ಪೋಕ್ಸೋ ಕಾಯಿದೆಯಡಿ ಎಎಸ್ ಐ ನನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com