

ನವದೆಹಲಿ: 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 30 ವರ್ಷದ ವ್ಯಕ್ತಿ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಪೊಲೀಸರ ನಿಷ್ಕ್ರಿಯತೆಯಿಂದ ದೆಹಲಿಯಲ್ಲಿ ಮಹಿಳೆಯರ ವಿರುದ್ಧ ಹೆಚ್ಚಿನ ಅಪರಾಧಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ನಂತರದ ಒಂದೇ ದಿನದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಬಾಲಕಿ ತೀವ್ರ ನೋವಿನಿಂದ ಬಳಲುತ್ತಿದ್ದಾಳೆ. ದೆಹಲಿ ಯಾವಾಗ ಅತ್ಯಾಚಾರ ಮುಕ್ತ ರಾಜ್ಯ ವಾಗುತ್ತದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಪ್ರಶ್ನಿಸಿದ್ದಾರೆ.