ಅನಂತ್ ನಾಗ್ ಹೊರತುಪಡಿಸಿ ಕಾಶ್ಮೀರದ ಎಲ್ಲಾ ಪ್ರದೇಶಗಳಲ್ಲೂ ಕರ್ಫ್ಯೂ ತೆರವು

ಗಲಭೆ ಪೀಡಿತ ಕಾಶ್ಮೀರದಲ್ಲಿ ಅನಂತ್ ನಾಗ್ ಜಿಲ್ಲೆಯೊಂದನ್ನು ಹೊರತುಪಡಿಸಿ ಉಳಿದೆಡೆ ಕಳೆದ 17 ದಿನಗಳಿಂದ ವಿಧಿಸಲಾಗಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ.
ಅನಂತ್ ನಾಗ್ ಹೊರತುಪಡಿಸಿ ಕಾಶ್ಮೀರದ ಎಲ್ಲಾ ಪ್ರದೇಶಗಳಲ್ಲೂ ಕರ್ಫ್ಯೂ ತೆರವು
ಅನಂತ್ ನಾಗ್ ಹೊರತುಪಡಿಸಿ ಕಾಶ್ಮೀರದ ಎಲ್ಲಾ ಪ್ರದೇಶಗಳಲ್ಲೂ ಕರ್ಫ್ಯೂ ತೆರವು

ಶ್ರೀನಗರ: ಗಲಭೆ ಪೀಡಿತ ಕಾಶ್ಮೀರದಲ್ಲಿ ಅನಂತ್ ನಾಗ್ ಜಿಲ್ಲೆಯೊಂದನ್ನು ಹೊರತುಪಡಿಸಿ ಉಳಿದೆಡೆ ಕಳೆದ 17 ದಿನಗಳಿಂದ ವಿಧಿಸಲಾಗಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. 

ಜು.26 ರಂದು ಅನಂತ್ ನಾಗ್ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರದೇಶಗಳಲ್ಲೂ ಕರ್ಫ್ಯೂ ಹಿಂಪಡೆಯಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕರ್ಫ್ಯೂ ಹಿಂಪಡೆಯಲಾಗಿರುವ ಹಿನ್ನೆಲೆಯಲ್ಲಿ ಜನ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ.

ಜನ ಸಂಚಾರಕ್ಕೆ ನಿರ್ಬಂಧ ವಾಪಸ್ ಪಡೆಯಲಾಗಿದೆ ಆದರೂ ನಾಲ್ಕು ಜನ ಒಂದೆಡೆ ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದ್ದು ನಿಷೇದಾಜ್ಞೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉಗ್ರ ಮುಜಾಫರ್ ವನಿ ಹತ್ಯೆಯನ್ನು ಖಂಡಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಜು.9 ರಿಂದ ಕರ್ಫ್ಯೂ ವಿಧಿಸಿ, ಮೊಬೈಲ್, ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಜು.26 ರಂದು ಕಾಶ್ಮೀರದಲ್ಲಿ ಮೊಬೈಲ್, ಇಂಟರ್ ನೆಟ್ ಸೇವೆಗಳನ್ನು ಪುನಾರಂಭಗೊಳಿಸಲಾಗಿತ್ತು.  ಪ್ರತಿಭಟನೆಯ ವೇಳೆ 47 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 5500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com