ಮಹದಾಯಿ ಹೋರಾಟ: ರಾಜ್ಯಕ್ಕೆ ಬಸ್ ಸೇವೆ ಸ್ಥಗಿತಗೊಳಿಸಿದ ಗೋವಾ

ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗೋವಾ...
ಲಕ್ಷ್ಮಿಕಾಂತ್ ಪರ್ಸೆಕರ್
ಲಕ್ಷ್ಮಿಕಾಂತ್ ಪರ್ಸೆಕರ್
ಪಣಜಿ: ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಕರ್ನಾಟಕಕ್ಕೆ ಬರುತ್ತಿದ್ದ ಅಂತರ್ ರಾಜ್ಯ ಬಸ್ ಸೇವೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ.
ಕರ್ನಾಕಟದ ಹಲವು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೆಕರ್ ಅವರು ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನಗಳ ಕಾಲ ಕರ್ನಾಟಕಕ್ಕೆ ತೆರಳುತ್ತಿದ್ದ ಕದಂಬ ಸಾರಿಗೆ ಸಂಸ್ಥೆಯ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪರ್ಸೆಕರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ನಾವು ಸುಶಿಕ್ಷಿತರು ಮತ್ತು ಸಂಸ್ಕೃತವಂತ ಜನ. ಹೀಗಾಗಿ ನ್ಯಾಯಾಂಗದ ನಿರ್ಧಾರಕ್ಕೆ ಬದ್ಧವಾಗಿರಬೇಕು. ಮಹದಾಯಿ ನ್ಯಾಯಾಧಿಕಣರ ತೀರ್ಪಿನ ಬಗ್ಗೆ ಹೇಳಿಕೆ ನೀಡಿ, ಉರಿಯುವ ಬೆಂಕಿಗೆ ತುಪ್ಪ ಸುರಿಯಲ್ಲ. ಆದರೆ ಅದು ನ್ಯಾಯಾಂಗ ನಿರ್ಧಾರ ಅನ್ನೊದನ್ನು ಅವರು(ಕನ್ನಡಿಗರು) ಅರ್ಥ ಮಾಡಿಕೊಳ್ಳಬೇಕು. ಬೇಕಿದ್ದರೆ ಆ ತೀರ್ಪನ್ನು ಪ್ರಶ್ನಿಸಲಿ ಎಂದು ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com