ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಜಾಮೀನು

ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಆಪ್...
ಅಮೃತಸರ: ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ನಾಯಕ ಸಂಜಯ್ ಸಿಂಗ್ ಅವರಿಗೆ ಪಂಜಾಬ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
40 ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಈ ಇಬ್ಬರು ನಾಯಕರಿಗೆ ಕೋರ್ಟ್ ಜಾಮೀನು ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿದೆ.
ತಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡುವ ಮೂಲಕ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪಂಜಾಬ್ ಕಂದಾಯ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಆಪ್ ನಾಯಕರು ಮಾದಕ ದ್ರವ್ಯದ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಎಳೆದು ಕುಟುಂಬದ ಪ್ರತಿಷ್ಠೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಜಿಥಿಯಾ ದೂರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com