ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಹತ್ಯೆ ಮಾಡಿದ ಬಿಎಸ್ ಎಫ್ ಯೋಧರು

ಪಂಜಾಬ್ ನ ಫಿರೋಜ್ ಪುರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್ ಎಫ್ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಹತ್ಯೆ ಮಾಡಿದ ಬಿಎಸ್ ಎಫ್ ಯೋಧರು
ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಹತ್ಯೆ ಮಾಡಿದ ಬಿಎಸ್ ಎಫ್ ಯೋಧರು
Updated on

ಚಂಡೀಗಢ: ಪಂಜಾಬ್ ನ ಫಿರೋಜ್ ಪುರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಬಿಎಸ್ ಎಫ್ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಭಾನುವಾರ ಸಂಜೆ ಪಾಕಿಸ್ತಾನದಿಂದ ಭಾರತದೊಳಗೆ ನುಸುಳಲು ಓರ್ವ ವ್ಯಕ್ತಿ ಯತ್ನಿಸಿದ್ದು, ಬಾರ್ಡರ್ ಔಟ್ ಪೋಸ್ಟ್ ನ ಸಿಬ್ಬಂದಿಗಳು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಪಾಕಿಸ್ತಾನಿ ಮೂಲದ ವ್ಯಕ್ತಿಯ ಮೃತದೇಹವನ್ನು ಪಂಜಾಬ್ ಪೋಲೀಸರ ವಶಕ್ಕೆ ನೀಡಲಾಗಿದೆ.

ಗಡಿ ಪ್ರದೇಶದ ಬೇಲಿಯಲ್ಲಿ, ಐವರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದದ್ದನ್ನು ಬಿಎಸ್ ಎಫ್ ಯೋಧರು ಗಮನಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳು ಬಿಎಸ್ ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಯೋಧರ ಪ್ರತಿದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಉಳಿದ 4 ಜನರು ಪರಾರಿಯಾಗಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆಯೇ 553 ಕಿಮಿ ದೂರವಿರುವ ಪಂಜಾಬ್ ನ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ವರ್ಷದ ಜುಲೈ ನಲ್ಲಿ ಗುರ್ದಾಸ್ ಪುರದಲ್ಲಿ ಪಾಕಿಸ್ತಾನದಿಂದ ಭಾರತಒಳಗೆ ನುಸುಳಿದ್ದ ಭಯೋತ್ಪಾದಕರು ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com