

ಬಾಲಸೋರ್: ಭಾರತದ ಪೂರ್ವ ರಾಜ್ಯಗಳು ಅಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಯಲ್ಲಿ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಎನ್ಡಿಎ ಸರ್ಕಾರ ಈ ಭಾಗಗಳತ್ತ ಹೆಚ್ಚಿನ ಗಮನಹರಿಸಲಿದೆ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ.
ಬಾಲಸೋರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗುಜರಾತ್, ರಾಜಸ್ಥಾನ, ಮಧ್ಯ ಪ್ರದೇಶ, ಹರಿಯಾಣ ಹಾಗೂ ಛತ್ತೀಸ್ಗಢ ರಾಜ್ಯಗಳಿಗೆ ಹೊಲಿಸಿದರೆ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ಅಧಿಕವಾಗಿದೆ. ಇದರಿಂದಾಗಿ ಯುವಕರು ಉದ್ಯೋಗಕ್ಕಾಗಿ ಪಶ್ಚಿಮ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಿ ಉದ್ಯೋಗ ಸೃಷ್ಟಿ ಹಾಗೂ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದು ಹೇಳಿದ್ದಾರೆ.
ಹಿಂದಿನ ಯುಪಿಎ ಸರ್ಕಾರ ಬಡತನದ ಬಗ್ಗೆ ಮಾತನಾಡಿ ಜನರನ್ನು ಇನ್ನಷ್ಟು ಬಡತನದ ಕೂಪಕ್ಕೆ ತಳ್ಳಿತ್ತು. ಬಡತನದ ಮುಕ್ತಿಗೆ ನಾಂದಿ ಎಂಬಂತೆ ನಮ್ಮ ಸರ್ಕಾರ ಈಗಾಗಲೇ ವಿದ್ಯುತ್ ರಹಿತ 1800 ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.