ನವದೆಹಲಿ: ರಾಷ್ಟ್ರೀಯ ಹೆದ್ದಾರಿ 1ರಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಶುಕ್ರವಾರ ಬೆಳಿಗ್ಗೆ ಸುಮಾರು 4.30ರಲ್ಲಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೆಹಲಿಯಿಂದ ಕರ್ನಲ್ ತೆರಳುತ್ತಿದ್ದ ಎಕೋ ಸ್ಫೋರ್ಟ್ ಕಾರು ಡಿಕ್ಕಿ ಹೊಡೆದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ತಿಳಿಸಿದ್ದಾರೆ. ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.