ಪಠಾಣ್ ಕೋಟ್ ದಾಳಿ: ಪಾಕಿಸ್ತಾನಕ್ಕೆ ಎನ್ ಐಎ ಕ್ಲೀನ್ ಚಿಟ್; ಕಾಂಗ್ರೆಸ್ ಗೆ ಅಚ್ಚರಿ

ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಕ್ಲೀನ್ ಚಿಟ್ ನೀಡಿರುವುದಕ್ಕಿ ಕಾಂಗ್ರೆಸ್ ಪಕ್ಷ ಶುಕ್ರವಾರ ಆಶ್ಚರ್ಯವ್ಯಕ್ತಪಡಿಸಿದೆ...
ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್
ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಕ್ಲೀನ್ ಚಿಟ್ ನೀಡಿರುವುದಕ್ಕಿ ಕಾಂಗ್ರೆಸ್ ಪಕ್ಷ ಶುಕ್ರವಾರ ಆಶ್ಚರ್ಯವ್ಯಕ್ತಪಡಿಸಿದೆ.

ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಮಾತನಾಡಿದ್ದ ಎನ್ ಐಎ ನಿರ್ದೇಶಕ ಶರದ್ ಕುಮಾರ್ ಅವರು, ವಾಯುನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರವಾಗಲಿ ಅಥವಾ ಪಾಕಿಸ್ತಾನದ ಸರ್ಕಾರಿ ಸಂಸ್ಥೆಗಳಾಗಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ನೆರವು ನೀಡಿಲ್ಲ. ವಾಯು ನೆಲೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಸರ್ಕಾರ ಬೆಂಬಲ ನೀಡಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ಅವರು, ಪಠಾಣ್ ಕೋಟ್ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಎನ್ಐಎ ಕ್ಲೀನ್ ಚೀಟ್ ನೀಡಿರುವುದು ನಿಜಕ್ಕೂ ಅಚ್ಚರಿಯಾಗುತ್ತಿದ್ದು, ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸಂದರ್ಶನದ ವಿರುದ್ಧ ಕಿಡಿಕಾರಿರುವ ಎನ್ಐಎ ಮುಖ್ಯಸ್ಥ ಪಠಾಣ್ ಕೋಟ್ ವಾಯುನೆಲೆ ದಾಳಿ ಪ್ರಕರಣದಲ್ಲಿ ಎನ್ಐಎ ಯಾವುದೇ ಕ್ಲೀನ್ ಚಿಟ್ ನ್ನು ಪಾಕಿಸ್ತಾನಕ್ಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com