ಖಾಡ್ಸೆ ನಂತರ ಚೌವ್ಹಾಣ್, ರಾಜೆ ರಾಜಿನಾಮೆ ಯಾವಾಗ?: ಕೇಜ್ರಿವಾಲ್

ಭ್ರಷ್ಟಾಚಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಮಹಾರಾಷ್ಟ್ರ ಕಂದಾಯ ಸಚಿವ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಭ್ರಷ್ಟಾಚಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳಂಕಿತ ಬಿಜೆಪಿ ನಾಯಕ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಖಾಡ್ಸೆ ರಾಜಿನಾಮೆ ನಂತರ ಟ್ವೀಟ್ ಮಾಡಿದ ದೆಹಲಿ ಸಿಎಂ, ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ವಸುಂಧರಾ ರಾಜೆ ಅವರು ಯಾವಾಗ ರಾಜಿನಾಮೆ ನೀಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಇದು ನಿಜವಾದ ಪರೀಕ್ಷೆ ಎಂದಿದ್ದಾರೆ.
ಚೌವ್ಹಾಣ್ ಅವರು ವ್ಯಾಪಂ ಹಗರಣ ಹಾಗೂ ವಸುಂಧರಾ ರಾಜೆ ಅವರು ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com