ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಮತ್ತೊಂದು ದಾಳಿಗೆ 2 ಪೊಲೀಸರು ಬಲಿ

ಪೊಲೀಸ್ ಚೆಕ್ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿದ್ದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಪೊಲೀಸ್ ಚೆಕ್ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಟೌನ್ ನಲ್ಲಿರುವ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಇಂದು ಬೆಳಿಗ್ಗೆ ಉಗ್ರರು ದಾಳಿ ನಡಸಿದ್ದಾರೆ. ಘಟನೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಮತ್ತು ಪೇದೆ ಮೃತಪಟ್ಟಿದ್ದಾರೆ. ಇನ್ನು ನಾಲ್ವರು ಪೊಲೀಸರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಉಗ್ರರನ್ನು ಸೆರೆ ಹಿಡಿಯಲು ಕಾರ್ಯಚರಣೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸಂಜೆ ಉಗ್ರರು ಬಿಎಸ್ ಎಫ್ ವಾಹನದ ಮೇಲೆ ದಾಳಿ ನಡೆಸಿ ಮೂವರು ಯೋಧರನ್ನು ಹತ್ಯೆ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳಿಗ್ಗೆ ಪೊಲೀಸ್ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಿ ತಮ್ಮ ಅಟ್ಟಹಾಸ ಮೆರೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com