ಅಮರನಾಥ್ ಯಾತ್ರೆ ಮೇಲೆ ಉಗ್ರ ದಾಳಿಗೆ ಸಂಚು: ಬಿಎಸ್ಎಫ್

ಮುಂಬರುವ ಜಮ್ಮು ಮತ್ತು ಕಾಶ್ಮೀರದ ಅಮರನಾಥ್ ಯಾತ್ರೆ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿರುವುದಾಗಿ...
ಅಮರನಾಥ್ ಯಾತ್ರೆಯ ಸಾಂದರ್ಭಿಕ ಚಿತ್ರ
ಅಮರನಾಥ್ ಯಾತ್ರೆಯ ಸಾಂದರ್ಭಿಕ ಚಿತ್ರ
ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರದ ಅಮರನಾಥ್ ಯಾತ್ರೆ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿರುವುದಾಗಿ ಗುಪ್ತಚರ ವರದಿಗಳು ತಿಳಿಸಿವೆ ಎಂದು ಗಡಿ ರಕ್ಷಣಾ ಪಡೆ(ಬಿಎಸ್ಎಫ್)ಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.
ಶುಕ್ರವಾರ ಬಿಜಬೆಹರಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಶ್ರೀನಗರದಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಬಿಎಸ್ಎಫ್ ಮಹಾ ನಿರ್ದೇಶಕ ಕೆ.ಕೆ.ಶರ್ಮಾ ಅವರು, ನಿನ್ನೆ ನಡೆದ ಉಗ್ರರ ದಾಳಿ ಆಕಸ್ಮಿಕ ಮತ್ತು ಅನಿರೀಕ್ಷಿತ. ಹೀಗಾಗಿ ನಾವು ಸೈನಿಕರನ್ನು ಕಳೆದುಕೊಳ್ಳಬೇಕಾಯಿತು ಎಂದರು.
ಉಗ್ರರ ಅಮರನಾಥ್ ಯಾತ್ರೆ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ವರದಿಗಳು ತಿಳಿಸಿವೆ. ಆದರೆ ಉಗ್ರರ ದಾಳಿಯನ್ನು ವಿಫಲಗೊಳಿಸಲು ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸಹ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com