ಜಮ್ಮುವಿನಲ್ಲಿ ಬಿಎಸ್ಎಫ್ ವಾಹನದ ಮೇಲೆ ಉಗ್ರರ ದಾಳಿ: 3 ಯೋಧರ ಸಾವು

ಜಮ್ಮು ಕಾಶ್ಮೀರದಲ್ಲಿ ಬಿಎಸ್ಎಫ್ ವಾಹನದ ಉಗ್ರರ ದಾಳಿ ನಡೆಸಿದ ಪರಿಣಾಮ ಮೂವರು ಯೋಧರ ಮೃತಪಟ್ಟಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಬಿಎಸ್ಎಫ್ ವಾಹನದ ಉಗ್ರರ ದಾಳಿ ನಡೆಸಿದ ಪರಿಣಾಮ ಮೂವರು ಯೋಧರ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. 
ಶ್ರೀನಗರ-ಜಮ್ಮು ರಾಷ್ಟ್ರೀಯ ಹೇದ್ದಾರಿ ಸಮೀಪದಲ್ಲಿರುವ ಬಿಜ್ಬೇಹರಾದಲ್ಲಿ ಹಿಜ್ಬುಲ್ಲಾ ಮುಜಾಹಿದ್ದೀನ್ ಉಗ್ರ ಸಂಘಟನೆ ದಾಳಿ ಮಾಡಿದೆ. ಈ ವೇಳೆ ಮೂವರು ಬಿಎಸ್ ಎಫ್ ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 
ಗಿರೀಶ್ ಕುಮಾರ್ ಶುಕ್ಲಾ, ಮಹಿಂದರ್ ರಾಮ್ ಮತ್ತು ಹಾವಾಲ್ದಾರ್ ದಿನೇಶ್ ಮೃತಪಟ್ಟವರು. ಶಸ್ತ್ರಾಸ್ತ್ರಗಳನೊಂದಿದ್ದ ಉಗ್ರರ ಗುಂಪು ಬಿಎಸ್ಎಫ್ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಿಎಸ್ಎಫ್ ವಕ್ತಾರ ವಿಶ್ವ ಬಂಧು ತಿಳಿಸಿದ್ದಾರೆ. 
ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹೀದ್ದೀನ್ ಸಂಘಟನೆ ದಾಳಿಯ ಹೊಣೆ ಹೊತ್ತಿದೆ. ಘಟನೆಯನ್ನು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಖಂಡಿಸಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದಾಳಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಬಿಎಸ್ ಎಫ್ ನಿರ್ದೇಶಕ ಜನರಲ್ ಕೆ ಕೆ ಶರ್ಮಾ ಅವರಿಗೆ ಘಟನೆ ಸ್ಥಳಕ್ಕೆ ಭೇಟಿ ನೀಡಿ ವಿವರ ನೀಡಿ ಎಂದು ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com