ಬಿಹಾರ ಟಾಪರ್ ಗಳ ವಿರುದ್ಧ ಎಫ್ ಐಆರ್ ದಾಖಲು

ಬಿಹಾರ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ 4 ವಿದ್ಯಾರ್ಥಿಗಳಿಗೆ ನಡೆಸಲಾದ ಮರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಾಲ್ಕು ವಿದ್ಯಾರ್ಥಿಗಳು ಹಾಗೂ ವಿ ಆರ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನ ಪಡೆದ 4 ವಿದ್ಯಾರ್ಥಿಗಳಿಗೆ ನಡೆಸಲಾದ ಮರು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಾಲ್ಕು ವಿದ್ಯಾರ್ಥಿಗಳು ಹಾಗೂ ವಿ ಆರ್ ಕಾಲೇಜಿನ ನಿರ್ದೇಶಕನ ವಿರುದ್ಧ ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಅಗ್ರಸ್ಥಾನ ಪಡೆದ ರೂಬಿ ರಾಯ್ ರಾಯಕೀಯ ಶಾಸ್ತ್ರ ಅಡುಗೆ ಸಬ್ಜೆಕ್ಟ್ ಎಂದ ಬೆನ್ನಲ್ಲೇ ಪಿಯು ಪರೀಕ್ಷಾ ಮಂಡಳಿ 14 ಟಾಪರ್​ಗಳಿಗೆ ಮರು ಪರೀಕ್ಷೆ ನಡೆಸಿತ್ತು. ಇದರಲ್ಲಿ ಸೌರಭ್ ಶ್ರೇಷ್ಠ, ರಾಹುಲ್ ಕುಮಾರ್, ರೂಬಿ ರಾಯ್ ಹಾಗೂ ಶಾಲಿನಿ ಎಂಬುವರು ಅನುತ್ತೀರ್ಣರಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಅಪರಾಧವೆಸಗಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ವಿಶೇಷ ತನಿಖಾ ತಂಡ 10 ದಿನದಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com