ತಮಿಳುನಾಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪಡೆಯಲಿರುವ 65 ಸಾವಿರ ಮಹಿಳೆಯರು!

ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಪಂಚಾಯ್ತಿ ಸೇರಿದಂತೆ ತಮಿಳುನಾಡಿನ ಸ್ಥಳೀಯ ಸಂಸ್ಥೆಗಳಲ್ಲಿ 65 ಸಾವಿರಕ್ಕೂ ಹೆಚ್ಚು ಮಹಿಳೆಯರು ಅಧಿಕಾರ ಪಡೆಯಲಿದ್ದಾರೆ.
ತಮಿಳುನಾಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪಡೆಯಲಿರುವ 65 ಸಾವಿರಕ್ಕೂ ಹೆಚ್ಚು ಮಹಿಳೆಯರು!
ತಮಿಳುನಾಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪಡೆಯಲಿರುವ 65 ಸಾವಿರಕ್ಕೂ ಹೆಚ್ಚು ಮಹಿಳೆಯರು!

ಚೆನ್ನೈ: ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಪಂಚಾಯ್ತಿ ಸೇರಿದಂತೆ ತಮಿಳುನಾಡಿನ ಸ್ಥಳೀಯ ಸಂಸ್ಥೆಗಳಲ್ಲಿ 65 ಸಾವಿರಕ್ಕೂ ಹೆಚ್ಚು ಮಹಿಳೆಯರು ಅಧಿಕಾರ ಪಡೆಯಲಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನಿಡುವ ಕಾನೂನಿಗೆ ತಮಿಳುನಾಡು ಸರ್ಕಾರ ಅಧಿಸೂಚನೆ ಹೊರಡಿಸಿರುವುದರಿಂದ ಸುಮಾರು 65 ಸಾವಿರಕ್ಕೂ ಹೆಚ್ಚು ಮಹಿಳೆಯರು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪಡೆಯಲಿದ್ದಾರೆ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಕಾನೂನನ್ನು 2016 ರ ಫೆಬ್ರವರಿಯ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. 1 .32 ಲಕ್ಷ ಕ್ಕೂ ಹೆಚ್ಚು ಹುದ್ದೆಗಳಿರುವ ಸ್ಥಳೀಯ ಸಂಸ್ಥೆಗಳಲ್ಲಿ ಇನ್ನು ನಾಲ್ಕು ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಅಧಿಕಾರ ಸಿಗಲಿದೆ ಎಂದು ಹೇಳಲಾಗಿದೆ. ಮೇ.23 ರಂದು ತಮಿಳುನಾಡು ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ತಮಿಳುನಾಡು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿರುವುದರಿಂದ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com