ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡರು!

ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿರುವ ಅಸಹಜ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಶಾಖಪಟ್ಟಣ: ನಾಯಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಇಬ್ಬರು ಕಾರ್ಮಿಕರು ಜೀವ ಕಳೆದುಕೊಂಡಿರುವ ಅಸಹಜ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಪಂಚಾಯತ್ ರಾಜ್ ಸಚಿವರ ಸಂಬಂಧಿಕರಿಗೆ ಸೇರಿದ ಕಟ್ಟಡದ ಮೂರನೇ ಮಹಡಿಯಲ್ಲಿ ಪಾಲಿಶ್ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಾದ ಗೋಪಿ(28 ) ಹುಸೇನ್(43) ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಜಿಗಿದು  ಮೃತಪಟ್ಟವರಾಗಿದ್ದಾರೆ.

ಪಾಲೀಶ್ ಕೆಲಸಕ್ಕಾಗಿ ಒಟ್ಟು ಐವರು ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಆದರೆ ಕಟ್ಟಡದಲ್ಲಿ ವಾಸಿಸುತ್ತಿರುವ ರಾಮ್ ಬಾಬು ಎಂಬುವವರು ತಮ್ಮ ಮನೆಯ ಜರ್ಮನ್ ಶೆಫರ್ಡ್ ನಾಯಿಯನ್ನು ಕಟ್ಟಿಹಾಕಲು ಮರೆತಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ನಾಯಿ ಏಕಾಏಕಿ ದಾಳಿ ಮಾಡಿದೆ. ಐವರು ಕಾರ್ಮಿಕರಲ್ಲಿ ಇಬ್ಬರು ಕಾರ್ಮಿಕರು ರೂಮ್ ಒಂದಕ್ಕೆ ತೆರಳಿ ಬಾಗಿಲು ಹಾಕಿಕೊಂಡು ನಾಯಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ನಾಯಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿರುವ ಉಳಿದ ಮೂವರು ಕಾರ್ಮಿಕರು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ ಪರಿಣಾಮ ಶ್ರೀನಿವಾಸ್(30) ಎಂಬ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದರೆ ಇಬ್ಬರು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com