
ಘಾಜಿಯಾಬಾದ್: ದೇಶದ ಹಣದುಬ್ಬರ ಪರಿಶೀಲನೆ ನಡೆಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲವಾಗಿದ್ದು, ಹಣದುಬ್ಬರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ.
ಜೂ.8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುವಾಗ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ ದೇವಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಅವರು, ಹಣದುಬ್ಬರ ದೇಶದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವಾಗ ಹಣದುಬ್ಬರವನ್ನು ಇಳಿಕೆ ಮಾಡುವುದಾಗಿ ಹೇಳಿದ್ದರು. ಆದರೆ, ಹಣದುಬ್ಬರ ಏರಿಕೆಯಾಗುತ್ತಲೇ ಬಂದಿದೆ. ಹೀಗಾಗಿ ಹಣದುಬ್ಬರದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.
ಜೂನ್. 8 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಚಿತ್ರಕ್ಕೆ ಬೆಂಕಿ ಹಚ್ಚುತ್ತಿದ್ದ ವೇಳೆ ಮೀನಾ ದೇವಿಯವರು ಹತ್ತಿರದಲ್ಲೇ ಇದ್ದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೆ, ಅವರ ಗಾರ್ಮೆಂಟ್ಸ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿತ್ತು. ಘಟನೆ ವೇಳೆ ಮೀನಾ ದೇವಿಯವರನ್ನು ರಕ್ಷಿಸಲು ಹೋಗಿದ್ದ ನರೇಂದ್ರ ಬಾಲ್ಮಿಕಿ ಎಂಬುವವರು ಗಾಯಗೊಂಡಿದ್ದರು, ನಂತರ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
Advertisement