ಪತ್ನಿಗೆ ಮೂರು ಬಾರಿ ತಲಾಖ್ ಹೇಳಿ ಆತ್ಮಹತ್ಯೆಗೆ ಶರಣಾದ ಪತಿ

ಸಂಸಾರದಿಂದ ಬೇಸರಗೊಂಡಿದ್ದ ಪತಿಯೊಬ್ಬ ಪತ್ನಿಗೆ ಮೂರು ಬಾರಿ ತಲಾಖ್ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಘಾಜಿಯಾಬಾದ್ ನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಘಾಜಿಯಾಬಾದ್: ಸಂಸಾರದಿಂದ ಬೇಸರಗೊಂಡಿದ್ದ ಪತಿಯೊಬ್ಬ ಪತ್ನಿಗೆ ಮೂರು ಬಾರಿ ತಲಾಖ್ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಘಾಜಿಯಾಬಾದ್ ನ ಮಸೂರಿ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ನಜಾಕಟ್ (28) ಆತ್ಮಹತ್ಯೆ ಶರಣಾದ ವ್ಯಕ್ತಿ. ನಜಾಕಟ್ ತಡರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ಈ ವೇಳೆ ಪತ್ನಿ ಶನ್ನೊ (25) ಜಗಳಕ್ಕಿಳಿದಿದ್ದಾನೆ. ಇಬ್ಬರ ನಡುವೆ ವಾಗ್ವಾದಗಳು ನಡೆದಿದೆ. ಪತ್ನಿಯ ಮಾತುಗಳನ್ನು ಕೇಳಿದ ನಜಾಕಟ್ ಕೋಪಗೊಂಡು ಪತ್ನಿಗೆ ಮೂರು ಬಾರಿ ತಲಾಖ್ ಹೇಳಿ ಮಕ್ಕಳು ಮಲಗಿದ್ದ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾನೆ.

ಪತಿ ವರ್ತನೆಗೆ ಬೇಸತ್ತಿದ್ದ ಪತ್ನಿ ರಾತ್ರಿ ವಿಚಾರಿಸಲು ಹೋಗದೆ ಸುಮ್ಮನಾಗಿದ್ದಾಳೆ. ಬೆಳಿಗ್ಗೆ ಎದ್ದು ನೋಡಿದಾಗ ರೂಮಿನಲ್ಲಿ ನಜಾಕಟ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಕೂಡಲೇ ಶನ್ನೊ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಜಾಕಟ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com