ಮಂಡ್ಯ: ಮಾದಕ ವಸ್ತು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ: ತನಿಖೆ ಆರಂಭ
ಮೈಸೂರು: ಕಾಲೇಜು ಯುವಕರನ್ನು ಗುರಿಯಾರಿಸಿಕೊಂಡು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮಂಡ್ಯದ ಮಾದಕ ವಸ್ತು ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ತನಿಖೆ ಆರಂಭಿಸಿದ್ದಾರೆ.
ಮಂಡ್ಯದಲ್ಲಿ ಉನ್ನತ ಮಟ್ಟದಲ್ಲಿರುವ ಇಂಜಿನಿಯರ್ ಕಾಲೇಜು ಬಳಿಯಿದ್ದ ಮನೆಯೊಂದರ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಸ್ಥಳದಲ್ಲಿದ್ದ ಡೈರಿ, ಬ್ರೌನ್ ಶುಗರ್ ಪ್ಯಾಕೆಟ್ ಗಳು ಹಾಗೂ ಇನ್ನಿತರೆ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವಿದ್ಯಾರ್ಥಿಗಳಿಗೆ ಈ ವಸ್ತುಗಳನ್ನು ತಲುಪಿಸುತ್ತಿರುವ ಮಧ್ಯವರ್ತಿಯನ್ನು ಕಂಡುಹಿಡಿಯಲು ಪೊಲೀಸರು ಹುಡುಕಾಟ ಆರಂಭಿಸಿದ್ದು, ನಗರದಲ್ಲೂ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ದಾಳಿಗೆ ವೇಳೆ ಅಧಿಕಾರಿಗಳು 200 ಗ್ರಾಂ ನಷ್ಟು ಬ್ರೌನ್ ಶುಗರ್ ಹಾಗೂ 1 ಕೆ.ಜಿಯಷ್ಟು ಗಾಂಜವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ತನಖೆಯನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಕೂಡ ಕೈಗೆತ್ತಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ದಾಳಿ ವೇಳೆ ಸಿಕ್ಕಿರುವ ಡೈರಿಯನ್ನು ಪರಿಶೀಲನೆ ನಡೆಸಲಾಗಿದ್ದು, ಡೈರಿಯಲ್ಲಿ ಕೆಲ ಫೋನ್ ನಂಬರ್ ಗಳು ದೊರಕಿವೆ. ಅವುಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಬಕಾರಿ ಇಲಾಖೆ ಕೂಡ ಪೊಲೀಸ್ ಅಧಿಕಾರಿಗಳೊಂದಿಗೆ ಕೈ ಜೋಡಿಸಿದ್ದು, ಪ್ರಕರಣವನ್ನು ಸಾಕಷ್ಟು ಕಾಯ್ದೆಗಳ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ