
ಚಂಡೀಗಢ: ಕಾಂಗ್ರೆಸ್ ಪಕ್ಷ ಸಿಖ್-ವಿರೋಧಿ ದಂಗೆಯ ಪ್ರಮುಖ ಆರೋಪಿ ಕಮಲ್ ನಾಥ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿರುವುದು ಸಿಖ್ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಅವಮಾನ ಎಂದು ಪಂಜಾಬ್ ಸಿಎಂ ಪರ್ಕಾಶ್ ಸಿಂಗ್ ಬಾದಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷ ಸಿಖ್ ನರಮೇಧದಲ್ಲಿ ಪ್ರಮುಖ ಆರೋಪಿಯಾಗಿರುವವರನ್ನು ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ನೇಮಿಸುವ ಮಟ್ಟಿಗೆ ಸಿಖ್ ಸಮುದಾಯದ ಬಗ್ಗೆ ಸಂವೇದನೆ ಕಳೆದುಕೊಂಡಿರುವುದು ಆಘಾತಕಾರಿ ವಿಷಯ ಎಂದು ಪರ್ಕಾಶ್ ಸಿಂಗ್ ಬಾದಲ್ ಹೇಳಿದ್ದಾರೆ. ಸಿಖ್ ಸಮುದಾಯಕ್ಕೆ ಉಂಟಾಗಿರುವ ನೋವಿನ ಮೇಲೆ ಮತ್ತೊಮ್ಮೆ ಬಾರೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ಈ ಕ್ರಮ ಕೈಗೊಂಡಿರುವ ಬಗ್ಗೆ ಆಘಾತವಾಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಕ್ರಮವನ್ನು ಟೀಕಿಸಿರುವ ವಕೀಲ ಫೋಲ್ಕಾ ಕಾಂಗ್ರೆಸ್ ಹಣ ಮತ್ತು ತೋಳ್ಬಲ ಇರುವವರ ಪರ ಇರುತ್ತದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
Advertisement