ಆಪ್ ಮಾಜಿ ಸಚಿವ ಗೋಪಾಲ್ ರೈ (ಸಂಗ್ರಹ ಚಿತ್ರ)
ಆಪ್ ಮಾಜಿ ಸಚಿವ ಗೋಪಾಲ್ ರೈ (ಸಂಗ್ರಹ ಚಿತ್ರ)

ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜಿನಾಮೆ

ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಸಚಿವ ಗೋಪಾಲ್ ರೈ ಮಂಗಳವಾರ ರಾಜಿನಾಮೆ ನೀಡಿದ್ದಾರೆ.

ನವದೆಹಲಿ: ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಸಚಿವ ಗೋಪಾಲ್ ರೈ ಮಂಗಳವಾರ ರಾಜಿನಾಮೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ನೀಡಿರುವ ಗೋಪಾಲ್ ರೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ತಮ್ಮ ಕತ್ತಿನ ಭಾಗದಲ್ಲಿ 17 ವರ್ಷಗಳಿಂದ ಇದ್ದ ಬುಲೆಟ್ ತೆಗೆಯಲು ನಡೆದ ಸರ್ಜರಿಯ ಹಿನ್ನೆಲೆಯಲ್ಲಿ  ತಮ್ಮನ್ನು ಸಚಿವಾಲಯ ಕರ್ತವ್ಯದಿಂದ ಮುಕ್ತರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ. ಇದೀಗ ಆಮ್ ಆದ್ಮಿ ಪಕ್ಷದ  ಮೂಲಗಳು ತಿಳಿಸಿರುವಂತೆ ಗೋಪಾಲ್ ರೈ ರಾಜಿನಾಮೆಯಿಂದಾಗಿ ತೆರವಾಗಿರುವ ಸಾರಿಗೆ ಸಚಿವ ಸ್ಥಾನಕ್ಕೆ ಹಾಲಿ ಲೋಕೋಪಯೋಗಿ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು  ನೇಮಕ ಮಾಡಲಾಗಿದ್ದು, ತಮ್ಮ ಇಲಾಖೆಗಳೊಂದಿಗೆ ಸಾರಿಗೆಯ ಇಲಾಖೆಯ ಉಸ್ತುವಾರಿಯನ್ನು ಕೂಡ ನೋಡಿಕೊಳ್ಳುವಂತೆ ಸೂಚಿಸಲಾಗಿದೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ಯೋಜನೆ ಜಾರಿ ಮಾಡುವ ವೇಳೆ ಆ್ಯಪ್ ಮೂಲಕ ಬಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಕ್ರಮ ಕೈಗೊಂಡಿತ್ತು. ಈ  ವೇಳೆ ಸಾರಿಗೆ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಅವ್ಯವಹಾರದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಹಲವು  ಪ್ರತಿಭಟನೆಗಳು ನಡೆದಿದ್ದವು. ಅಲ್ಲದೆ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರು ಎಸಿಬಿಗೆ ಈ ಬಗ್ಗೆ ದೂರು ಕೂಡ ನೀಡಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರದ ಈ ಉದ್ದೇಶಿತ ಯೋಜನೆಗೆ  ಅನುಮೋದನೆ ನೀಡಲು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಿರಾಕರಿಸಿದ್ದರು. ಹೀಗಾಗಿ ಜೂನ್ ತಿಂಗಳಿನಲ್ಲಿ ಆರಂಭವಾಗ ಬೇಕಿದ್ದ ಈ ಯೋಜನೆ ಸ್ಥಗಿತಗೊಂಡಿತ್ತು.

Related Stories

No stories found.

Advertisement

X
Kannada Prabha
www.kannadaprabha.com