ಮುರಳಿ ಮನೋಹರ್ ಜೋಷಿ ಮುಂದಿನ ರಾಷ್ಟ್ರಪತಿ?

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಷಿ ಅವರು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮುರಳಿ ಮನೋಹರ್ ಜೋಷಿ
ಮುರಳಿ ಮನೋಹರ್ ಜೋಷಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಷಿ ಅವರು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಪ್ರಧಾನಿ ನರೆಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರವನ್ನು ಈ ಹಿಂದೆ ಮುರಳಿ ಮನೋಹರ್ ಜೋಷಿ ಪ್ರತಿನಿಧಿಸುತ್ತಿದ್ದರು, ಬಿಜೆಪಿ ಮುರಳಿ ಮನೋಹರ್ ಜೋಷಿ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲಿದೆ ಎಂಬ ವರದಿಗಳಿಗೆ ತದ್ವಿರುದ್ಧವೆಂಬಂತೆ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿ ಅವರ ಫೋಟೊಗಳನ್ನು ಹಾಕಲಾಗಿತ್ತಾದರೂ, ಮುರಳಿಮನೋಹರ್ ಜೋಷಿ ಅವರ ಫೋಟೊಗಳನ್ನು ಹಾಕಿರಲಿಲ್ಲ.

ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ 2017 ಕ್ಕೆ ಮುಕ್ತಾಯಗೊಳ್ಳಲಿದ್ದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವಿಷಯದ ಬಗ್ಗೆ ಮುರಳಿ ಮನೋಹರ್ ಜೋಷಿ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಸೇರಿದಂತೆ ಇನ್ನೂ ಹಲವು ಆರ್ ಎಸ್ ಎಸ್ ನ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com