ದೇಶ

ಉ.ಪ್ರದೇಶ ವಿಧಾನಸಭೆ ಚುನಾವಣೆಗೆ ಶೀಲಾ ದಿಕ್ಷಿತ್ ಕಾಂಗ್ರೆಸ್ ಸಿಎಂ ಅಭ್ಯರ್ಥಿ?

ಮುಂಬರುವ ಉತ್ತರ ವಿಧಾನಸಭೆ ಚುನಾವಣೆಯಲ್ಲಿ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಶೀಲಾ ದಿಕ್ಷಿತ್ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ...

ಉ.ಪ್ರದೇಶ ವಿಧಾನಸಭೆ ಚುನಾವಣೆಗೆ ಶೀಲಾ ದಿಕ್ಷಿತ್ ಕಾಂಗ್ರೆಸ್ ಸಿಎಂ ಅಭ್ಯರ್ಥಿ?
ಶೀಲಾ ದಿಕ್ಷಿತ್
Published On :
ನವದೆಹಲಿ: ಮುಂಬರುವ ಉತ್ತರ ವಿಧಾನಸಭೆ ಚುನಾವಣೆಯಲ್ಲಿ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಶೀಲಾ ದಿಕ್ಷಿತ್ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ಶೀಲಾ ದಿಕ್ಷಿತ್ ಅವರ ಹೆಸರನ್ನು ಶಿಫಾರಸು ಮಾಡಿರುವ ಉತ್ತರ ಪ್ರದೇಶ ಚುನಾವಣೆ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು, ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಶೀಲಾ ದಿಕ್ಷಿತ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶೀಲಾ ದಿಕ್ಷಿತ್ ಪ್ರಮುಖ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವುದರಿಂದ ಆ ಸಮುದಾಯದ ಮತಗಳನ್ನು ಪಕ್ಷಕ್ಕೆ ಸೆಳೆಯಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಮಂದಿರ-ಮಂಡಲ್ ರಾಜಕೀಯದಿಂದಾಗಿ ಇತ್ತೀಚಿಗ ಬ್ರಾಹ್ಮಣರ ಮತಗಳು ಬಿಜೆಪಿಗೆ ಶಿಫ್ಟ್ ಆಗಿದ್ದು, ಆ ಮತಗಳನ್ನು ಸೆಳೆಯಲು ಶೀಲಾ ದಿಕ್ಷಿತ್ ಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.
78 ವರ್ಷದ ಶೀಲಾ ದಿಕ್ಷಿತ್ ಅವರು 1999ರಿಂದ 2014ರವರೆಗೆ ಸತತ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.