ಜೂ.25ಕ್ಕೆ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಚಾಲನೆ: ನಾಯ್ಡು

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 25ರಂದು ಪುಣೆಯಲ್ಲಿ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ...
ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 25ರಂದು ಪುಣೆಯಲ್ಲಿ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ.
ದೇಶಾದ್ಯಂತ ಒಟ್ಟು 20 ಸ್ಮಾರ್ಟ್ ಸಿಟಿಗಳ ನಿರ್ಮಾಣ ಕಾರ್ಯಕ್ಕೆ ಜೂನ್ 25ರಿಂದ ಏಕಕಾಲಕ್ಕೆ ಚಾಲನೆ ನೀಡಲಾಗುವುದು ಎಂದು ನಾಯ್ಡು ತಿಳಿಸಿದ್ದಾರೆ. ಅಲ್ಲದೆ ಈ ಸ್ಮಾರ್ಟ್ ಸಿಟಿಗಳು ಇತರೆ ಅಭಿವದ್ಧಿ ಕಾರ್ಯಗಳಿಗೆ ಪ್ರೇರಣೆ ನೀಡಲಿವೆ ಎಂದಿದ್ದಾರೆ.
ಸ್ಮಾರ್ಟ್ ಸಿಟಿ ಎಂಬುದು ಒಂದು ಲೈಟ್ ಹೌಸ್ ಇದ್ದಂತೆ. ಒಂದು ಲೈಟ್ ಹೌಸ್ ಇದ್ದರೆ ಸಾಮಾನ್ಯವಾಗಿ ಎಲ್ಲರೂ ಆ ಕಡೆ ನೋಡುತ್ತಾರೆ. ಹೀಗಾಗಿ ಕೆಲವು ಸ್ಮಾರ್ಟ್ ಸಿಟಿಗಳನ್ನು ಅಭಿವೃದ್ಧಿ ಮಾಡಿದರೆ, ಆದಾಯ ಹೆಚ್ಚಿಸಿಕೊಳ್ಳಲು ಮಹಾನಗರ ಪಾಲಿಕೆಗಳು ಸಹ ಸ್ಪರ್ಧೆಗಿಳಿಯುತ್ತವೆ ಎಂದಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಕಳೆದ ವರ್ಷ ಜೂನ್ 25ರಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com