ಮುಜಾಫರನಗರ: ಬಿಎಸ್ಪಿ ಶಾಸಕರೊಬ್ಬರ ಮಾಲೀಕತ್ವದ ಪೇಪರ್ ಮಿಲ್ ನಲ್ಲಿ 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಜನಸತ್ ರಸ್ತೆಯಲ್ಲಿರುವ ಶಾಸಕರ ಮಿಲ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯನ್ನು ಹತ್ಯೆ ಮಾಡುವುದಕ್ಕು ಮುನ್ನ ಆಕೆ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಪ್ರಕರಣ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಲೇಬರ್ ಕಾಂಟ್ರ್ಯಾಕ್ಟರ್ ಖುರ್ಷಿದ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.