

ನವದೆಹಲಿ: ಕಾಂಗ್ರೆಸ್ ಹಾಗೂ ಅದರ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಸಮರ ಸಾರಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ತಮ್ಮ ಹೋರಾಟದ ಭಾಗವಾಗಿರುವ ಮುಂದಿನ ಯೋಜನೆಯನ್ನು ಪ್ರಕಟಿಸಿದ್ದಾರೆ.
ಈಗಾಗಲೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಅವ್ಯವಹಾರಗಳನ್ನು ಬಯಲು ಮಾಡಲು ಯತ್ನಿಸುತ್ತಿರುವ ಸುಬ್ರಹ್ಮಣಿಯನ್ ಸ್ವಾಮಿ, ಈಗ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳನ್ನು ಬಯಲು ಮಾಡುವುದಾಗಿ ತಿಳಿಸಿದ್ದಾರೆ.