

ಶ್ರೀನಗರ: ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ರಂಜಾನ್ ಅಂಗವಾಗಿ ಸುಮಾರು 200 ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಇಫ್ತಾರ್ ಕೂಟ ಆಯೋಜಿಸಿದ್ದಾರೆ.
ಶ್ರೀನಗರದ ಝೀಲಂ ನದಿಯ ಬಳಿ ಇರುವ ಜೀರೋ ಬ್ರಿಡ್ಜ್ ಬಳಿ ಇಫ್ತಾರ್ ಕೂಟ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಭಾಗವಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಇಪ್ತಾರ್ ಕೂಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ತಂದೆ-ತಾಯಿ ಪ್ರೀತಿಯಿಂದ ವಂಚಿತರಾದ ಅನಾಥ ಮಕ್ಕಳೊಂದಿಗೆ ಇಪ್ತಾರ್ ಕೂಟದಲ್ಲಿ ಭಾಗಿಯಾಗುವುದಕ್ಕಿಂತ ಸಂತೋಷಕರ ವಿಷಯ ಮತ್ತೊಂದಿಲ್ಲ ಎಂದು ಮೆಹಬೂಬಾ ಮುಫ್ತಿ, ಈ ಅನಾಥ ಮಕ್ಕಳ ಭವಿಷ್ಯವನ್ನು ಯಶಸ್ವಿಗೊಳಿಸಲು ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಇಂತಹ ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬಿ ವಿದ್ಯಾಭ್ಯಾಸದತ್ತ ಗಮನ ಹರಿಸುವಂತೆ ಮಾಡಬೇಕು ಎಂದು ಮೆಹಬೂಬಾ ಮುಫ್ತಿ ಅಭಿಪ್ರಾಯಪಟ್ಟಿದ್ದಾರೆ.