

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಯೋಧರು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಭದ್ರತಾ ಪಡೆ ಯೋಧರು ಕುಪ್ವಾರ ಜಿಲ್ಲೆಯ ಸೋಗಮ್ ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಬು ಉಕಾಶ್ ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಕ್ಕೆ ಪಡೆದಿರುವ ಉಕಾಶ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಪಾಕಿಸ್ತಾನ ಮೂಲದ ಉಕಾಶ್ ಉತ್ತರ ಕಾಶ್ಮೀರ ಭಾಗದಲ್ಲಿ ಹಲವು ವರ್ಷಗಳಿಂದ ಸಂಘಟನೆಯನ್ನು ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.