ಅರವಿಂದ ಸುಬ್ರಮಣಿಯನ್ ನೇಮಕ ಸಮರ್ಥಿಸಿಕೊಂಡ ಅರುಣ್ ಜೇಟ್ಲಿ

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ವಿರೋಧವನ್ನು...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ನವದೆಹಲಿ: ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ವಿರೋಧವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸರ್ಕಾರಕ್ಕೆ ಅವರ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಮತ್ತು ಅವರ ಸಲಹೆ ಅತ್ಯಾಮೂಲ್ಯವಾದದ್ದು ಎಂದು ಹೇಳಿದ್ದಾರೆ.
ಅರವಿಂದ ಸುಬ್ರಮಣಿಯನ್ ಅವರ ಮೇಲೆ ಸರ್ಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ. ಕಾಲ ಕಾಲಕ್ಕೆ ಅವರು ಸರ್ಕಾರಕ್ಕೆ ನೀಡುವ ಸಲಹೆ ಅಮೂಲ್ಯವಾದದ್ದು ಎಂದು ಅರುಣ್ ಜೇಟ್ಲಿ ವರದಿಗಾರರಿಗೆ ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಹುದ್ದೆಗೆ ಸರ್ಕಾರ ಪರಿಶೀಲಿಸುತ್ತಿರುವ ಐವರು ಅಭ್ಯರ್ಥಿಗಳ ಪೈಕಿ ಭಾರತದ ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ಹೆಸರೂ ಸಹ ಪ್ರಮುಖವಾಗಿ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಅರವಿಂದ ಸುಬ್ರಮಣಿಯನ್ ವಿರುದ್ದ ಟ್ವಿಟರ್ ನಲ್ಲಿ ಕಿಡಿಕಾರಿದ್ದ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೊಳಿಸಿದ್ದ ಬೌದ್ಧಿಕ ಆಸ್ತಿ ಹಕ್ಕು (ಐಪಿಆರ್) ಮಾತ್ರವಲ್ಲದೆ, ಆಡಳಿತಾರೂಢ ಎನ್ ಡಿಎ ಸರ್ಕಾರದ ನೀತಿ ಮತ್ತು ಆಶಯಗಳನ್ನು ಅರವಿಂದ ಅವರು ವಿರೋಧಿಸಿದ್ದರು. ಅಮೆರಿಕದ ಔಷಧೀಯ ಹಿತಾಸಕ್ತಿಗಳನ್ನು ಸಂರಕ್ಷಿಸಿಕೊಳ್ಳಲು ಅಮೆರಿಕ ಭಾರತದ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯಾರು ಹೇಳಿದ್ದು? ಇದನ್ನು ಹೇಳಿದ್ದು, ಅರವಿಂದ ಸುಬ್ರಮಣಿಯನ್ ಅವರೇ ಇಂತಹ ವ್ಯಕ್ತಿಗೆ ಅಧಿಕಾರ ನೀಡಬಾರದು ಎಂದು ವಾಗ್ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com