
ನವದೆಹಲಿ: ಹಲವು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಸಮರ ಸಾರಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಇದೀಗ ಪ್ರಧಾನಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಅರವಿಂದ ಸುಬ್ರಮಣಿಯನ್ ಅವರ ವಿರುದ್ಧ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿರುವ ಸುಬ್ರಮಣಿಯನ್ ಸ್ವಾಮಿ ಅವರು, ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೊಳಿಸಿದ್ದ ಬೌದ್ಧಿಕ ಆಸ್ತಿ ಹಕ್ಕು (ಐಪಿಆರ್) ಮಾತ್ರವಲ್ಲದೆ, ಆಡಳಿತಾರೂಢ ಎನ್ ಡಿಎ ಸರ್ಕಾರದ ನೀತಿ ಮತ್ತು ಆಶಯಗಳನ್ನು ಅರವಿಂದ ಅವರು ವಿರೋಧಿಸಿದ್ದರು ಇಂತಹ ಮನಸ್ಥಿತಿಯುಳ್ಳವರು ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಹೇಳಿದ್ದಾರೆ.
ಅಮೆರಿಕದ ಔಷಧೀಯ ಹಿತಾಸಕ್ತಿಗಳನ್ನು ಸಂರಕ್ಷಿಸಿಕೊಳ್ಳಲು ಅಮೆರಿಕ ಭಾರತದ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯಾರು ಹೇಳಿದ್ದು? ಇದನ್ನು ಹೇಳಿದ್ದು, ಅರವಿಂದ ಸುಬ್ರಮಣಿಯನ್ ಅವರೇ ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ತೆಗೆದುಹಾಕಬೇಕು.
Advertisement