ದೇಶ

ಚೆನ್ನೈ: ಹಾಡು ಹಗಲೆ ರೈಲ್ವೆ ನಿಲ್ದಾಣದಲ್ಲಿ ಇನ್ಫೋಸಿಸ್ ಉದ್ಯೋಗಿ ಭೀಕರ ಕೊಲೆ

ನುನ್ಗಾಬಾಕ್ಕಂ ರೈಲ್ವೇ ನಿಲ್ದಾಣದಲ್ಲಿ ಹಾಡು ಹಗಲೆ ಇನ್ಫೋಸಿಸ್ ಉದ್ಯೋಗಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಕೊಲೆ ಮಾಡಿದ್ದಾನೆ...

ಚೆನ್ನೈ: ಹಾಡು ಹಗಲೆ ರೈಲ್ವೆ ನಿಲ್ದಾಣದಲ್ಲಿ ಇನ್ಫೋಸಿಸ್ ಉದ್ಯೋಗಿ ಭೀಕರ ಕೊಲೆ
ಮೃತ ಇನ್ಫೋಸಿಸ್ ಉದ್ಯೋಗಿ ಮೃತದೇಹ
Published On :

ಚೆನ್ನೈ: ನುನ್ಗಾಬಾಕ್ಕಂ ರೈಲ್ವೇ ನಿಲ್ದಾಣದಲ್ಲಿ ಹಾಡು ಹಗಲೆ ಇನ್ಫೋಸಿಸ್ ಉದ್ಯೋಗಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಕೊಲೆ ಮಾಡಿದ್ದಾನೆ.

ಕೊಲೆಯಾದ ಯುವತಿಯನ್ನು 25 ವರ್ಷದ ಸ್ವಾತಿ ಎಂದು ಗುರುತಿಸಲಾಗಿದೆ. ಇನ್ಫೋಸಿಸ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಎಂದಿನಂತೆ ಕಚೇರಿಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕನೊಬ್ಬ ಚಾಕುವಿನಿಂದ ಆಕೆಗೆ ಮನಬಂದಂತೆ ಇರಿದಿದ್ದಾನೆ.

ಸ್ವಾತಿಯ ಮುಖಕ್ಕೆ ಹಾಗೂ ಕುತ್ತಿಗೆ ಭಾಗಗಳಿಗೆ ಚೂರಿ ಇರಿದಿದ್ದರಿಂದ ತೀವ್ರ ರಕ್ತಸ್ರಾವದಿಂದಾಗಿ ಕೆಲ ನಿಮಿಷದಲ್ಲೇ ರೈಲ್ವೇ ನಿಲ್ದಾಣದಲ್ಲೇ ಆಕೆ ಮೃತಪಟ್ಟಿದ್ದಾರೆ.

ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ವಾತಿ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.