
ನವದೆಹಲಿ: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯಂತಹ ಕರಾಳ ಅಧ್ಯಾಯದ ಹೊರತಾಗಿಯೂ ಭಾರತದ ಜನತೆ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ದೇಶದ ಜನರ ಧ್ವನಿಯನ್ನು ಅಡಗಿಸುವಂತಹ ದಿನಗಳಿದ್ದವು, ಆದರೆ ಈಗ ದೇಶದ ಜನತೆ ಸರ್ಕಾರದ ಕಾರ್ಯವೈಖರಿ ಕುರಿತು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಪ್ರಕಟಿಸುತ್ತಿದ್ದಾರೆ ಎಂದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆಯಾದಾಗ ಸಾವಿರಾರು ರಾಜಕೀಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿ ನಾಯಕರುಗಳನ್ನು ಕಾರಣವೇ ಇಲ್ಲದೆ ಬಂಧಿಸಲಾಗಿತ್ತು. ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು, ಜಯಪ್ರಕಾಶ್ ನಾರಾಯಣ್ ಸೇರಿದಂತೆ ಹಲವು ರಾಜಕೀಯ ಮುಖಂಡರ ಬಂಧನದ ಮೂಲಕ ಇಡೀ ದೇಶವೇ ಒಂದು ಬೃಹತ್ ಜೈಲಾಗಿ ಪರಿವರ್ತನೆಯಾಗಿತ್ತು ಎಂದು ಮೋದಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
Advertisement