ಡಾಬಾಗಳಲ್ಲಿ ಮದ್ಯ ಮಾರಾಟ ಮಾಡಿದರೆ 10 ಸಾವಿರ ರೂ ದಂಡ!

ಡಾಬಾಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಮದ್ಯ ಮಾರಾಟ, ಸೇವನೆಗೆ ಕಡಿವಾಣ ಹಾಕಲು ದೆಹಲಿ ಸರ್ಕಾರದ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳಲು ಮುಂದಾದೆ.
ಡಾಬಾ
ಡಾಬಾ

ನವದೆಹಲಿ: ಡಾಬಾಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಮದ್ಯ ಮಾರಾಟ, ಸೇವನೆಗೆ ಕಡಿವಾಣ ಹಾಕಲು ದೆಹಲಿ ಸರ್ಕಾರದ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಮದ್ಯ ಮಾರಾಟ, ಮದ್ಯ ಸೇವನೆಗೆ ಅವಕಾಶ ನೀಡುವ ಡಾಬಾ ಮಾಲೀಕರಿಗೆ 10,000 ರು ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಡಾಬಾಗಳಲ್ಲಿ ಮದ್ಯ ಮಾರಾಟ, ಸೇವನೆಗೆ ಅವಕಾಶ ನೀಡಲಾಗುತ್ತಿದೆ ಎಂದು ಡಾಬಾ ಬಳಿ ಇರುವ ಅನೇಕ ಜನರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಡಾಬಾ ಬಳಿ ಮದ್ಯ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಮಾಲೀಕರು ಸೂಚನಾ ಫಲಕವನ್ನು ಹಾಕಬೇಕೆಂದು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಉಲ್ಲಂಘನೆ ಮಾಡಿದವರಿಗೆ 10 ಸಾವಿರ ರೂ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಡಾಬಾ ಸುತ್ತಮುತ್ತಲ ಪ್ರದೇಶಗಳಲ್ಲಿ ಮದ್ಯ ಸೇವನೆ ಮಾಡುವುದು ಕಾನೂನು ಬಾಹಿರವಾಗಿದೆ. ಇನ್ನು ಸೂಚನಾ ಫಲಕ ಹಾಕುವ ಆದೇಶವನ್ನು ಜಾರಿಗೊಳಿಸಲು ವಿಶೇಷ ಅಭಿಯಾನ ಕೈಗೊಳ್ಳುವುದಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com